ದುರಂತ: ಬಸ್ ಅಪಘಾತ; 12 ಸಾವು, 36 ಜನರಿಗೆ ಗಾಯ
ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 36 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಸಲಾಸರ್ ನಿಂದ ತೆರಳುತ್ತಿದ್ದ ಬಸ್ ಸಿಕಾರ್ ಜಿಲ್ಲೆಯ ಲಕ್ಷ್ಮಣಗಢವನ್ನು ತಲುಪಿದಾಗ ಕಲ್ವರ್ಟ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಸಲಾಸರ್ ನಿಂದ ಲಕ್ಷ್ಮಣಗಢಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ತಿರುವಿನಲ್ಲಿ ಫ್ಲೈಓವರ್ ನ ಒಂದು ಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮಣಗಢದಲ್ಲಿ ದುರಂತ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಗಾಯಾಳುಗಳನ್ನು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಲಕ್ಷ್ಮಣಗಢ ಮತ್ತು ಸಿಕಾರ್ ನ ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj