ಶಿಮ್ಲಾದಲ್ಲಿ ಭೀಕರ ರಸ್ತೆ ಅಪಘಾತ: 4 ಸಾವು, 3 ಮಂದಿಗೆ ಗಾಯ

ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಕುಡು-ದಿಲ್ತಾರಿ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಮಾಚಲ ರಸ್ತೆ ಸಾರಿಗೆ ನಿಗಮ (ಎಚ್ಆರ್ ಟಿಸಿ) ಬಸ್ ಏಳು ಜನರೊಂದಿಗೆ ಕುಡುದಿಂದ ದಿಲ್ತಾರಿಗೆ ತೆರಳುತ್ತಿದ್ದಾಗ ಬೆಳಿಗ್ಗೆ 6: 45 ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಈ ಘಟನೆಯಲ್ಲಿ ಬಿರ್ಮಾ ದೇವಿ ಮತ್ತು ಧನ್ ಶಾ ಸ್ಥಳದಲ್ಲೇ ಮೃತಪಟ್ಟರೆ, ಬಸ್ ಚಾಲಕ ಕರಮ್ ದಾಸ್ ಮತ್ತು ಕಂಡಕ್ಟರ್ ರಾಕೇಶ್ ಕುಮಾರ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಶಿಮ್ಲಾದ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth