ಉತ್ತರ ಪ್ರದೇಶದಲ್ಲಿ ಪಲ್ಟಿಯಾಗಿ ಚರಂಡಿಗೆ ಬಿದ್ದ ಕಾರು: 6 ಮಂದಿ ಸಾವು - Mahanayaka
1:03 AM Wednesday 27 - August 2025

ಉತ್ತರ ಪ್ರದೇಶದಲ್ಲಿ ಪಲ್ಟಿಯಾಗಿ ಚರಂಡಿಗೆ ಬಿದ್ದ ಕಾರು: 6 ಮಂದಿ ಸಾವು

05/02/2024


Provided by

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ವಿಫ್ಟ್ ಕಾರು ಪಲ್ಟಿಯಾಗಿ ಚರಂಡಿಗೆ ಬಿದ್ದ ಪರಿಣಾಮ ಕನಿಷ್ಠ 6 ಜನರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ತಿಲಕ್ ಸಮಾರಂಭದಿಂದ (ಮದುವೆಗೆ ಸಂಬಂಧಿಸಿದ) ಹಿಂದಿರುಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಚರಂಡಿಗೆ ಬೀಳುವ ಮೊದಲು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.

ಸಿಕಂದ್ರ ಪೊಲೀಸ್ ಠಾಣೆ ಪ್ರದೇಶದ ಜಗನ್ನಾಥಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.‌ ಮೃತರನ್ನು ದೇರಾಪುರ ಮತ್ತು ಶಿವರಾಜ್ಪುರ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ