12:13 AM Tuesday 27 - January 2026

ಮುಂಬೈನ ಬಾಂದ್ರಾದಲ್ಲಿ ನಡೀತು ದುರಂತ: ಕಾಲ್ತುಳಿತದಲ್ಲಿ 9 ಮಂದಿಗೆ ಗಂಭೀರ ಗಾಯ

27/10/2024

ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ಕಾಲ್ತುಳಿತ ಪ್ರಕರಣ ‌ನಡೆದಿರುವುದು ಬೆಳಕಿಗೆ ಬಂದಿದೆ. ಪರಿಣಾಮ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ.

ಬಾಂದ್ರಾ ಟರ್ಮಿನಸ್ ನ ಪ್ಲಾಟ್ ಫಾರ್ಮ್ ಸಂಖ್ಯೆ 1 ರಲ್ಲಿ ಬೆಳಿಗ್ಗೆ 5.56 ಕ್ಕೆ ಈ ಘಟನೆ ನಡೆದಿದ್ದು, ಗಾಯಗೊಂಡ ಎಲ್ಲರನ್ನು ಭಾಭಾ ಆಸ್ಪತ್ರೆಗೆ ಸೇರಿಸಲಾಗಿದೆ.

ಭಾನುವಾರ ಕಾಲ್ತುಳಿತ ಸಂಭವಿಸಿತ್ತು. ಬಾಂದ್ರಾ ಟರ್ಮಿನಸ್ ನಿಲ್ದಾಣದಲ್ಲಿ ರೈಲು ಸಂಖ್ಯೆ 22921 (ಬಾಂದ್ರಾ-ಗೋರಖ್ಪುರ ಎಕ್ಸ್‌ ಪ್ರೆಸ್ ರೈಲು) ಗಾಗಿ ಜನಸಂದಣಿ ನೆರೆದಿದ್ದ ಪ್ಲಾಟ್ ಫಾರ್ಮ್ ಸಂಖ್ಯೆ 1 ರಲ್ಲಿ ಜನದಟ್ಟಣೆಯಿಂದಾಗಿ ಕಾಲ್ತುಳಿತದಲ್ಲಿ ಕೆಲವು ಪ್ರಯಾಣಿಕರು ಗಾಯಗೊಂಡರು. ಗಾಯಗೊಂಡ ಪ್ರಯಾಣಿಕರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖ್ದರ್ ಗುಪ್ತಾ (28), ರವೀಂದ್ರ ಹರಿಹರ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್ರಾಮ್ ಕಂಗಾಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಾಹ್ನಿ (19) ಮತ್ತು ನೂರ್ ಮೊಹಮ್ಮದ್ ಶೇಖ್ (18) ಎಂದು ಗುರುತಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version