ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂದು ತಿಳಿಸಿದ ಯಡಿಯೂರಪ್ಪ ಕಾರ್ಯದರ್ಶಿ ಸಂತೋಷ್ - Mahanayaka
9:57 PM Wednesday 11 - September 2024

ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂದು ತಿಳಿಸಿದ ಯಡಿಯೂರಪ್ಪ ಕಾರ್ಯದರ್ಶಿ ಸಂತೋಷ್

30/11/2020

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ರಾಜ್ಯದ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿತ್ತು. ಇಂದು ಅವರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,  “ನಾನು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ,  ಮೂರು ದಿನದ ಹಿಂದೆ ಮದುವೆ ಕಾರ್ಯಕ್ರಮದಲ್ಲಿ ಊಟ ಮಾಡಿದ ಬಳಿಕ ಅಜೀರ್ಣ ಉಂಟಾಗಿತ್ತು. ಇದಕ್ಕಾಗಿ ನಾನು ತೆಗೆದುಕೊಂಡ ಮಾತ್ರೆ ಬದಲಾಗಿದೆ” ಎಂದು ಅವರು ತಿಳಿಸಿದ್ದಾರೆ.


“ರಾಜಕೀಯ ಒತ್ತಡ ಯಾವ ಕಾಲದಲ್ಲಿಯೂ ಇರುತ್ತದೆ. ಆದರೆ ಅದಕ್ಕಾಗಿ ಮಾತ್ರೆ ತೆಗೆದುಕೊಳ್ಳುವ ಸ್ವಭಾವ ನನ್ನದಲ್ಲ,   ನಿದ್ರೆ ಬಾರದಾಗ ನಾನು  ನಿದ್ರೆ ಮಾತ್ರೆ ತೆಗೆದುಕೊಳ್ಳುತ್ತೇನೆ. ಆದರೆ ಬೇರೆ ಮಾತ್ರೆ ತೆಗೆದುಕೊಂಡ ಕಾರಣ ಈ ರೀತಿಯ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.


Provided by

ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ  ಪ್ರಕರಣವು ವಿವಿಧ ಅನುಮಾನಗಳಿಗೆ ಕಾರಣವಾಗಿತ್ತು. ಡಿ.ಕೆ.ಶಿವಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿ, ರಹಸ್ಯ ವಿಡಿಯೋದ ಕಾರಣಕ್ಕಾಗಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು.

ಇತ್ತೀಚಿನ ಸುದ್ದಿ