ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು - Mahanayaka
1:56 AM Thursday 16 - October 2025

ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

kundapura news
06/08/2022

ಕುಂದಾಪುರ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ‌ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೋಟದಲ್ಲಿ ನಡೆದಿದೆ.


Provided by

ಕೋಟ ನಿವಾಸಿ 67 ವರ್ಷದ ರತ್ನ ಮೃತದುರ್ದೈವಿ. ಇವರು ಸುಮಾರು 20 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಆ. 1ರಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದು, ಕೂಡಲೇ  ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ  ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ  ದಾಖಲಿಸಲಾಗಿತ್ತು.

ಅಜ್ಜರ ಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರತ್ನ ಅವರು ಚಿಕಿತ್ಸೆ ಫಲಕಾರಿಯಾಗದೆ ಆ.5ರಂದು ರಾತ್ರಿ ಮೃತಪಟ್ಟಿದ್ದಾರೆ.. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ