ದೆಹಲಿಯ ಮುಂದಿನ ಮುಖ್ಯಮಂತ್ರಿ ಅತಿಶಿ ಮಾರ್ಲೆನಾ
ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಅತಿಶಿ ಮಾರ್ಲೆನಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದ್ದು, ಅತಿಶಿ ಮರ್ಲೆನಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಕೇಜ್ರಿವಾಲ್ ನಿವಾಸದಲ್ಲಿ ಬೆಳಗ್ಗಿನಿಂದಲೂ ಸಭೆ ನಡೆದಿತ್ತು. ಮುಖ್ಯಮಂತ್ರಿ ಸ್ಥಾನಕ್ಕೆ ಹಲವು ಹೆಸರುಗಳು ಕೇಳಿ ಬಂದಿದ್ದವು. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಅತಿಶಿ ಅವರ ಹೆಸರನ್ನು ಮುಂದಿಡಲಾಗಿತ್ತು.
ಸಭೆಯಲ್ಲಿ ಅತಿಶಿ ಅವರ ಹೆಸರನ್ನು ಕೇಜ್ರಿವಾಲ್ ಘೋಷಿಸಿದರು ಮತ್ತು ಇತರ ನಾಯಕರು ಅವರನ್ನು ಬೆಂಬಲಿಸಿದರು.
ಎಎಪಿ ನಾಯಕರು ಜೈಲಿಗೆ ಹೋಗುವ ಸಂದರ್ಭ ಸೃಷ್ಟಿಯಾದ ವೇಲೆ ಅತಿಶಿ ಪಕ್ಷದ ಜವಾಬ್ದಾರಿಯನ್ನ ಅತ್ಯಂತ ಸಮರ್ಥವಾಗಿ ನಿಭಾಯಿಸಿದರು. ಅವರ ಪಕ್ಷ ನಿಷ್ಠೆಗೆ ಇದೀಗ ಸಿಎಂ ಸ್ಥಾನ ಅವರಿಗೆ ಒಲಿದು ಬಂದಿದೆ.
ಜಾಮೀನು ಪಡೆದ ಕೇಜ್ರಿವಾಲ್ ಅವರು ಸೆಪ್ಟೆಂಬರ್ 15 ರಂದು ಎರಡು ದಿನಗಳಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: