12:09 PM Saturday 23 - August 2025

ಬಿಜೆಪಿ ಸೋಲಿಗೆ ‘ಪೂಜ್ಯ’ ತಂದೆ ಮಗ ಕಾರಣ ಎಂದ ಯತ್ನಾಳ್!

yathnal
23/11/2024

ಬೆಳಗಾವಿ: ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದಿದ್ದು, ಎನ್ ಡಿಎ ಮೈತ್ರಿಕೂಟಕ್ಕೆ ಭಾರೀ ಮುಖಭಂಗವಾಗಿದೆ. ಈ ನಡುವೆ ಬಿಜೆಪಿ ಶಾಸಕ ಯತ್ನಾಳ್, ಮೂರು ಕ್ಷೇತ್ರಗಳ ಸೋಲಿಗೆ ಅಪ್ಪ—ಮಗನೇ ಹೊಣೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಳ್, ಮಹಾರಾಷ್ಟ್ರ ಮತ್ತು ಜಾರ್ಖಂಡ್ ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಪೂಜ್ಯ ತಂದೆ—ಮಗ ಕಾರಣ ಎಂದು ಪರೋಪಕ್ಷವಾಗಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಿಡಿಕಾರಿದರು.

ಇನ್ನೂ ವಕ್ಫ್ ವಿವಾದ ಈ ಚುನಾವಣೆಯಲ್ಲಿ ಪರಿಣಾಮ ಬೀರಲಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ವಿವಾದ ಈಗ ಆರಂಭವಾಗಿದೆ. ಜನರಿಗೆ ಇನ್ನು ಗೊತ್ತಾಗಬೇಕಿದೆ. ವಕ್ಫ್ ವಿಚಾರವಾಗಿಯೇ ಮಹಾರಾಷ್ಟ್ರದಲ್ಲಿ ಚುನಾವಣೆ ಮಾಡಿದರು. ಉದ್ದವ್ ಠಾಕ್ರೆ ಔರಂಗಜೇಬ್ ಸಮಾಧಿಗೆ ನಮಸ್ಕಾರ ಮಾಡಿದ್ರು, ಉದ್ಧವ್ ಠಾಕ್ರೆಯನ್ನು ಮಹಾರಾಷ್ಟ್ರದ ಜನರು ಮುಳುಗಿಸಿದರು ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version