ಬಿಜೆಪಿ ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

dr sudhakar
08/08/2025

ಚಿಕ್ಕಬಳ್ಳಾಪುರ: ಬಿಜೆಪಿ ಸಂಸದ ಕೆ.ಸುಧಾಕರ್ ಅವರ ಹೆಸರು ಬರೆದಿಟ್ಟು ಕಾರು ಚಾಲಕ ಬಾಬು ಎಂಬ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಡೆತ್ ನೋಟ್​​ ನಲ್ಲಿ ಉಲ್ಲೇಖಿಸಿದ್ದ ಮೂವರ ವಿರುದ್ಧವೂ ಎನ್ ಎಸ್ ಸೆಕ್ಷನ್ 108, 352, 351ರ ಅಡಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಸಂಸದ  ಸುಧಾಕರ್ ವಿರುದ್ಧವೂ ಸಹ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, A1 ಆರೋಪಿಯಾಗಿದ್ದಾರೆ. ದೂರಿನಲ್ಲಿ ನಾಗೇಶ್, ಮಂಜುನಾಥ ಹೆಸರು ಸಹ ಉಲ್ಲೇಖಿಸಲಾಗಿದೆ.

ಬಿಎನ್ಎಸ್ ಕಾಯ್ದೆ ಅಡಿ ಅಡಿ ಸೆಕ್ಷನ್ 108, 352 , 351 ಹಾಗೂ ಎಸ್ ಸಿ ಎಸ್ ಟಿ ಕಾಯ್ದೆ ಅಡಿ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಡೆತ್ ನೋಟ್ ನಲ್ಲಿ ಹೆಸರು ಇರುವ ಸಂಸದ ಸುಧಾಕರ್, ನಾಗೇಶ್ ಮತ್ತು ಮಂಜುನಾಥ್ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ. ಇದರಲ್ಲಿ ಸಂಸದ ಸುಧಾಕರ್ ಎ1 ಆರೋಪಿಯಾಗಿದ್ದರೆ, ನಾಗೇಶ್ ಎ2, ಮಂಜುನಾಥ್ ಎ3 ಆರೋಪಿಯನ್ನಾಗಿ ಮಾಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version