ರೈತರ ಮೇಲಿನ ದಾಳಿ ಮೋದಿ ಸರ್ಕಾರಕ್ಕೆ ನಾಚಿಕೆಗೇಡು: ರೈತ ಸಂಘಟನೆಗಳ ಆಕ್ರೋಶ - Mahanayaka
2:46 AM Tuesday 27 - February 2024

ರೈತರ ಮೇಲಿನ ದಾಳಿ ಮೋದಿ ಸರ್ಕಾರಕ್ಕೆ ನಾಚಿಕೆಗೇಡು: ರೈತ ಸಂಘಟನೆಗಳ ಆಕ್ರೋಶ

protest
13/02/2024

ನವದೆಹಲಿ: ಈ ಹಿಂದೆ ಸರ್ಕಾರ ಈಡೇರಿಸುವ ಭರವಸೆ ನೀಡಿ ಅದನ್ನು ಮಾಡಿಲ್ಲದಿರುವುದರಿಂದಲೇ ರೈತರ ಮತ್ತೆ ಬೀದಿಗಿಳಿದಿದ್ದು. ರೈತರ ಮೇಲಿನ ದಾಳಿ ಮೋದಿ ಸರ್ಕಾರಕ್ಕೆ ನಾಚಿಕೆಗೇಡು ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಾಳಿ ನಡೆಸುತ್ತಿರುವ ವಿಚಾರವಾಗಿ ರೈತ ನಾಯಕ ರಾಕೇಶ್ ಟಿಕಾಯತ್ ನೇತೃತ್ವದ ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಮೋದಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

ರೈತ ಸಂಘಟನೆಗಳ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿದೆ. ಈಗ ರೈತರು ಕೇಳುತ್ತಿರುವುದು ಯಾವುದೂ ಹೊಸ ಬೇಡಿಕೆಗಳಲ್ಲ.. ಈ ಹಿಂದೆ ನಡೆದ ಪ್ರತಿಭಟನೆಯಲ್ಲಿ ಸರ್ಕಾರ ಈಡೇರಿಸುತ್ತೇವೆ ಎಂದು ಈ ವರೆಗೂ ಈಡೇರಿಸದ ಬೇಡಿಕೆಗಳಾಗಿವೆ ಎಂದು ಹೇಳಿದೆ.

MSP ಕಾನೂನು, ಸ್ವಾಮಿನಾಥನ್ ಸಮಿತಿ ವರದಿ ಅನುಷ್ಠಾನ ಮತ್ತು ಸಾಲ ಮನ್ನಾ ಎಲ್ಲಾ ರೈತರ ಕಾಳಜಿ ಮತ್ತು ಈ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ನೀಡುತ್ತೇವೆ. ಎಂಎ ಸ್‌ ಪಿ ಖಾತರಿ ಕಾನೂನು ಮತ್ತು ಸ್ವಾಮಿನಾಥನ್ ಸಮಿತಿ ವರದಿ, ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಸಾಲ ಮನ್ನಾ ದೇಶಾದ್ಯಂತ ರೈತರ ಸಮಸ್ಯೆಗಳು. ಹಲವಾರು ರೈತ ಸಂಘಟನೆಗಳಿವೆ ಮತ್ತು ಅವರ ಸಮಸ್ಯೆಗಳು ವಿಭಿನ್ನವಾಗಿವೆ. ದೆಹಲಿಯತ್ತ ಪಾದಯಾತ್ರೆ ಮಾಡುತ್ತಿರುವ ಈ ರೈತರಿಗೆ ಸರ್ಕಾರ ಸಮಸ್ಯೆ ಸೃಷ್ಟಿಸಿದರೆ ನಾವು ಅವರಿಗೆ ಬೆಂಬಲ ನೀಡುತ್ತೇವೆ. ನಾವು ಅವರಿಂದ ದೂರವಿಲ್ಲ, ನಾವು ಅವರ ಬೆಂಬಲದಲ್ಲಿದ್ದೇವೆ ಎಂದು ಟಿಕಾಯತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ