ಯೂಟ್ಯೂಬರ್ ಗಳ ಮೇಲೆ ಹಲ್ಲೆ: ಗೂಂಡಾಗಳನ್ನು ಬಂಧಿಸಿ: DSS ಮುಖಂಡ ಸದಾಶಿವ ಪಡುಬಿದ್ರಿ ಒತ್ತಾಯ

ಮಂಗಳೂರು: ಧರ್ಮಸ್ಥಳದಲ್ಲಿ ಕಿರಾತಕರ ದೌರ್ಜನ್ಯಕ್ಕೆ ಬಲಿಯಾಗಿದ್ದ ಪಾಂಗಳ ಕ್ರಾಸ್ ಸಮೀಪದ ಸೌಜನ್ಯ ರವರ ಮನೆಗೆ ಭೇಟಿನೀಡಲು ಬಂದಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ರಜತ್ ಎಂಬವರ ಸಂದರ್ಶನ ನಡೆಸುತ್ತಿದ್ದ ನಾಲ್ಕು ಜನ ಯೂಟ್ಯೂಬರ್ ಗಳ ಮೇಲೆ 60–70 ಜನ ಗೂಂಡಾಗಳು ಏಕಾಏಕಿ ದಾಳಿ ಮಾಡಿ ಮಾರಣಾoತಿಕವಾಗಿ ಹಲ್ಲೆನಡೆಸಿರುವುದು ಅಮಾನವೀಯ ಹಾಗೂ ಖಂಡನೀಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ), ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ, ಇದರ ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿ ತಿಳಿಸಿದ್ದಾರೆ.
ಈ ಘಟನೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ), ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ, ಮಂಗಳೂರು ಜಿಲ್ಲಾ ಸಮಿತಿಯು ಖಂಡಿಸುತ್ತದೆ. ಅಲ್ಲದೆ ತಪ್ಪಿತಸ್ಥರನ್ನು ಹಾಗೂ ಇದಕ್ಕೆ ಕುಮ್ಮಕ್ಕು ಕೊಟ್ಟ ಎಲ್ಲರನ್ನೂ ಕೂಡಲೇ ಬಂಧಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD