2ನೇ ತರಗತಿಯ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಣಕ್ಕೆ ಯತ್ನ! - Mahanayaka
1:11 PM Wednesday 27 - August 2025

2ನೇ ತರಗತಿಯ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಣಕ್ಕೆ ಯತ್ನ!

mysore
21/08/2023


Provided by

ಮೈಸೂರು: ಶಾಲೆಯ ಶೌಚಾಲಯಕ್ಕೆ ತೆರಳಿದ್ದ 2ನೇ ತರಗತಿಯ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಲು ಯತ್ನಿಸಿದ ಆಘಾತಕಾರಿ ಘಟನೆ  ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಲಕಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದು, ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ. ಇದರಿಂದ ಭಯಭೀತಳಾದ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದು, ಇದರಿಂದ ಗಲಿಬಿಲಿಗೊಂಡ ಅಪಹರಣಕಾರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಅಪಹರಿಸಲು ಯತ್ನಿಸಿದವರು ಯಾರು ಮತ್ತು ಅವರ ಉದ್ದೇಶ ಏನು ಅನ್ನೋದು ಇನ್ನೂ ತಿಳಿದು ಬಂದಿಲ್ಲ,  ಘಟನೆ ಬಗ್ಗೆ ಶಾಲೆಯ ಮುಖ್ಯಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ