2:21 AM Saturday 31 - January 2026

ಜಿಂಕೆ ಬುರುಡೆ, ಕೊಂಬು ಮಾರಾಟಕ್ಕೆ ಯತ್ನ: ಪೊಲೀಸರ ಬಲೆಗೆ ಬಿದ್ದ ಆರೋಪಿಗಳು

chamarajanagara
03/06/2023

ಚಾಮರಾಜನಗರ: ಜಿಂಕೆ ಬುರುಡೆ ಸಮೇತ ಕೊಂಬುಗಳನ್ನು ಮಾರಾಟ ಮಾಡಲು ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಲ್ಲಿ ಇಂದು ಸಂಜೆ ನಡೆದಿದೆ‌.

ಗುಂಡ್ಲುಪೇಟೆ ತಾಲೂಕಿನ ದೇವರಹಳ್ಳಿ ಗ್ರಾಮದ  ಹಾಲುಮದಿಯಯ್ಯ(40) ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಮಹಾದೇವನಾಯಕ ಬಂಧಿತ ಆರೋಪಿಗಳು‌. ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇವರು ಜಿಂಕೆಯ ಬುರುಡೆಗಳನ್ನು ತರುತ್ತಿದ್ದಾಗ ಪೊಲೀಸ್ ಅರಣ್ಯ ಸಂಚಾರಿ ದಳವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ‌.

ಬಂಧಿತರಿಂದ ಕೊಂಬು ಸಮೇತ ಎರಡು ಜಿಂಕೆ ಬುರುಡೆಗಳು, 2 ಮೊಬೈಲ್ ಹಾಗೂ 750 ರೂ. ಹಣವನ್ನು ವಶಕ್ಕೆ ಪಡೆದು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version