ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನ: ಮಂಗಳೂರಿನಲ್ಲಿ ಇಂದು ಸಂಜೆ ಪ್ರತಿಭಟನೆ

09/10/2025
ಮಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿಯವರ ಮೇಲೆ ಕೋರ್ಟ್ ಕಲಾಪದ ವೇಳೆಯೇ ಹಿರಿಯ ವಕೀಲರಾದ ರಾಕೇಶ್ ಕಿಶೋರ್ ಎಂಬವರು ಶೂ ಎಸೆಯಲು ಯತ್ನಿಸಿರುವ ಸಂವಿಧಾನ ವಿರೋಧಿ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ -ದ. ಕ. ಜಿಲ್ಲಾ ಸಮಿತಿಯು ಅ.09ರಂದು ಪ್ರತಿಭಟನೆ ನಡೆಸಲಿದೆ.
ಸಂಜೆ 4 ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧದ (ಕ್ಲಾಕ್ ಟವರ್ ) ಎದುರು “ಪ್ರತಿಭಟನಾ ಸಭೆ”ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿ ಮಹಾನಾಯಕಕ್ಕೆ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD