ರೈಲಿನಡಿಗೆ ತಲೆ ಕೊಟ್ಟು ಒಂದೇ ಕುಟುಂಬದ ಮೂವರು ಸಾವಿಗೆ ಯತ್ನ: ಇಬ್ಬರು ಸಾವು, ಬಾಲಕಿ ಸ್ಥಿತಿ ಚಿಂತಾಜನಕ

ರಾಯಚೂರು: ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದು, ಘಟನೆಯಲ್ಲಿ ದಂಪತಿ ಮೃತಪಟ್ಟರೆ, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
ಶಬ್ಬೀರ್ ಅಹ್ಮದ್(35) ಹಾಗೂ ಅವರ ಪತ್ನಿ ಜೆಲೆಖತ್ ಬೇಗಂ ಮೃತಪಟ್ಟವರಾಗಿದ್ದಾರೆ. ಇವರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬಾಲಕಿಯ ಕೈ ತುಂಡಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
ಬಾಲಕಿಯನ್ನು ಮೈಮುನ್ ಬೇಗಂ ಎಂದು ಗುರುತಿಸಲಾಗಿದೆ. ಬಾಲಕಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಬಾಲಕಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುಟುಂಬ ಸಾವಿನ ಮೊರೆ ಹೋಗಲು ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth