ಆಗಸ್ಟ್ 1: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ (ಆರೆಂಜ್ ಅಲರ್ಟ್) ನೀಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ಆಗಸ್ಟ್ 1ರ ಶನಿವಾರ ರಜೆ ಘೋಷಿಸಲಾಗಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳು ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ರಜೆ ಅನ್ವಯಿಸುತ್ತದೆ.
ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅತಿಯಾದ ಮಳೆ ಇರುವ ಕಡೆಗಳಲ್ಲಿ ನದಿ ತೀರ, ಸಮುದ್ರ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/H1duNIQRfXnJcfQKWPzNqD


























