ಔರಾದ್ : ಜುಲೈ 19ರಂದು ಲೇಖನಿ ತಪಸ್ವಿ ಮತ್ತು ಚೇತನ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಔರಾದ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಿನಾಚರಣೆ ಹಾಗೂ ‘ಲೇಖನಿ ತಪಸ್ವಿ’ ಮತ್ತು ‘ಚೇತನ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 19ರಂದು ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆಯಲಿದೆ.
ಕಲಬುರಗಿ ವಿಭಾಗದ ಸಂಯುಕ್ತ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಸುಭಾಷ್ ಬಣಗಾರ ಅವರಿಗೆ ಲೇಖನಿ ತಪಸ್ವಿ ಪ್ರಶಸ್ತಿ, ಹಿರಿಯ ಪತ್ರಕರ್ತರು, ಸಂಘದ ರಾಜ್ಯ ಉಪಾಧ್ಯಕ್ಷರಾದ ಭವಾನಿಸಿಂಗ್ ಮಾಣಿಕಸಿಂಗ್ ಠಾಕೂರ್ ಅವರಿಗೆ ಚೇತನ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಅಂದು ಬೆಳಗ್ಗೆ 10:30ಕ್ಕೆ ಶಾಸಕ ಪ್ರಭು ಚವ್ಹಾಣ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ಸಾಗರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸುವರು. ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯಸಾನಿಧ್ಯ ವಹಿಸಲಿದ್ದಾರೆ.
ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸುವರು. ತಹಶೀಲ್ದಾರ ಮಲ್ಲಶೆಟ್ಟಿ ಚಿದ್ರೆ, ಇಒ ಬಿರೇಂದ್ರಸಿಂಗ್ ಠಾಕೂರ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸಿಪಿಐ ರಘುವೀರಸಿಂಗ್ ಠಾಕೂರ್ ಭಾಗವಹಿಸುವರು.
ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುವಂತೆ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ರವಿಕುಮಾರ ಶಿಂದೆ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97