ಕಾಶ್ಮೀರ ಕುರಿತ ಹೇಳಿಕೆ: ಲೇಖಕಿ ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ವಿಚಾರಣೆ

14/06/2024

ಕಾಶ್ಮೀರದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ 2010 ರಲ್ಲಿ ದಾಖಲಾದ ಪ್ರಕರಣದಲ್ಲಿ ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್ ವಿರುದ್ಧ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಶುಕ್ರವಾರ ಆದೇಶ ನೀಡಿದ್ದಾರೆ.

ಅಲ್ಲದೇ ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಅಂತರರಾಷ್ಟ್ರೀಯ ಕಾನೂನು ಪ್ರಾಧ್ಯಾಪಕ ಶೇಖ್ ಶೌಕತ್ ಹುಸೇನ್ ಅವರನ್ನು ಯುಎಪಿಎ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಲು ಅನುಮೋದನೆ ನೀಡಲಾಗಿದೆ.
ಅಕ್ಟೋಬರ್ 28, 2010 ರಂದು ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಸುಶೀಲ್ ಪಂಡಿತ್ ನೀಡಿದ ದೂರಿನ ಆಧಾರದ ಮೇಲೆ ನವದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ರಾಯ್ ಮತ್ತು ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version