ಬಾಂಬೆ ಐಐಟಿ ಕಾಲೇಜಿನ ಕ್ಯಾಂಟೀನ್ನಲ್ಲಿ ‘ಸಸ್ಯಹಾರಿಗಳಿಗೆ ಮಾತ್ರ’ ಎಂದು ಬರೆದಿರುವ ಪೋಸ್ಟರ್ಗಳು ಪತ್ತೆಯಾಗಿದೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಐಐಟಿ (ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ) ವಿದ್ಯಾರ್ಥಿಗಳು ಆಹಾರದ ವಿಚಾರದಲ್ಲಿ ತಾರತಮ್ಯ ಎಸಗುವ ಪೋಸ್ಟರ್ ವಿರುದ್ಧ ಧ್ವನಿ ಎತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲೂ ಭಾರೀ ಚರ...
ಹರ್ಯಾಣದ ಮೇವಾತ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಅಲ್ಲದೇ ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ನುಹ್ ಜಿಲ್ಲೆಯ ನಂದ್ ಗ್ರಾಮದ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ನಡೆಸುತ್ತಿದ್ದ ರ್ಯಾಲಿಯ ಮೇಲೆ ಜನರ ಗುಂಪೊಂದು ಕಲ್ಲು ತೂರಾಟ ಮಾಡಿದೆ. ಗೋರಕ್ಷಕ ಮತ್ತು ಭಿವಾನಿ ಸಾವಿನ ಪ್ರಕರಣದ ಆರೋಪಿ ಮೋನು ಮಾ...
ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ತಂದೆಯ ಸ್ನೇಹಿತರೇ ಅತ್ಯಾಚಾರ ಮಾಡಿರುವ ಅಮಾನೀಯ ಕೃತ್ಯ ರಾಜಸ್ಥಾನದಲ್ಲಿ ನಡೆದಿದೆ. ಹಿರಿಯ ಬಾಲಕಿ ಏಳೂವರೆ ತಿಂಗಳ ಗರ್ಭಿಣಿಯಾಗಿದ್ದು, ಕಿರಿಯ ಬಾಲಕಿ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಈ ದುಷ್ಕೃತ್ಯ ನಡೆದಿದೆ. ಬಾಲ...
ಟೊಮೆಟೊ ಬೆಲೆಯು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 200 ರೂಪಾಯಿ ತಲುಪಿದೆ. ಹೀಗಾಗಿ ಸಬ್ಸಿಡಿ ದರದಲ್ಲಿ 500 ಪಡಿತರ ಅಂಗಡಿಗಳಲ್ಲಿ ಟೊಮೆಟೊ ಮಾರಾಟ ಮಾಡಲು ತಮಿಳುನಾಡಿನ ಸಹಕಾರಿ ಇಲಾಖೆ ನಿರ್ಧರಿಸಿದೆ. ಪ್ರಸ್ತುತ ರಾಜ್ಯದ 302 ಪಡಿತರ ಅಂಗಡಿಗಳಲ್ಲಿ ಕೆಜಿಗೆ 60 ರೂಪಾಯಿ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟವಾಗುತ್ತಿದೆ. ಇದನ್ನು ಈಗ 500...
ರಾಜಸ್ಥಾನದ ಹಳ್ಳಿಯೊಂದರಲ್ಲಿ ಕೆಲವು ಶಾಲಾ ವಿದ್ಯಾರ್ಥಿಗಳು ಬಾಲಕಿಯ ನೀರಿನ ಬಾಟಲಿಗೆ ಮೂತ್ರವನ್ನು ತುಂಬಿಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹುಡುಗರು ತಮ್ಮ ಸಹಪಾಠಿಯ ಬ್ಯಾಗ್ ನೊಳಗೆ ಪ್ರೇಮ ಪತ್ರವನ್ನೂ ಹಾಕಿದ್ದಾರೆ. ಇದರಿಂದ ಕೋಪಗೊಂಡ ಗ್ರಾಮಸ್ಥರು ಬಾಲಕನ ಮನೆಗೆ ನುಗ್ಗಿದ್ದಾರೆ. ಈ ವೇಳೆ ತಡೆದ ಪೊಲೀಸರ...
ಕೆಲ ದಿನಗಳ ಹಿಂದೆ ಕಡಲತೀರದಲ್ಲಿ ಕಾಣಿಸಿಕೊಂಡ ನಿಗೂಢ ವಸ್ತುವು ಭಾರತೀಯ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ಎಲ್ವಿ) ನ ಅವಶೇಷಗಳು ಎಂದು ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆ ಸೋಮವಾರ ಘೋಷಿಸಿದೆ. ಪಶ್ಚಿಮ ಆಸ್ಟ್ರೇಲಿಯಾದ ಜುರಿಯನ್ ಕೊಲ್ಲಿಯ ಸಮೀಪವಿರುವ ಕಡಲತೀರದಲ್ಲಿರುವ ವಸ್ತುವು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ...
23 ಕೆಜಿ ಗಾಂಜಾ ಸಾಗಿಸುತ್ತಿದ್ದ ಶ್ರೀಕಾಕುಳಂ ಜಿಲ್ಲೆಯ ಮಾಜಿ ರಣಜಿ ಕ್ರಿಕೆಟಿಗನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮಾಜಿ ರಣಜಿ ಕ್ರಿಕೆಟಿಗನನ್ನು ಬುಡುಮೂರು ನಾಗರಾಜು ಎಂದು ಗುರುತಿಸಲಾಗಿದೆ ಎಂದು ಇನ್ಸ್ ಪೆಕ್ಟರ್ ಲಕ್ಷ್ಮಣರಾವ್ ಅವರು ಹೇಳಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿಯ ವಿಜಯಾದಿತ್ಯ ಪಾರ್ಕ್...
ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಕೆಲವು ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಆಸ್ತಿಗಳನ್ನು ವಶಕ್ಕೆ ತಗೆದುಕೊಳ್ಳಲು ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತಾತ್ಕಾಲಿ...
ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದಾರೆ. ಬಜೌರ್ನ ಖಾರ್ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ಕಾರ್ಯಕರ್ತರ ಸಮಾವೇಶದಲ್ಲಿ ಬಾಂಬ್ ಸ್ಫೋ...
ವಲಸೆ ಕಾರ್ಮಿಕನೋರ್ವ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಆರೋಪಿಯು ಬಾಲಕಿಯ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಆಲುವಾ ಸ್ಥಳೀಯ ಮಾರುಕಟ್ಟೆಯ ಹಿಂಭಾಗದಲ್ಲಿ ಬಿಸಾಡಿದ್ದಾನೆ. ಈ ಸಂಬಂಧ ಬಿಹಾರ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ...