ಚೀನಾದಲ್ಲಿ ಮಳೆ ಅಬ್ಬರ ಜೋರಾಗಿದೆ. ಪರಿಣಾಮವಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಮಂದಿ ಕಾಣೆಯಾಗಿದ್ದಾರೆ. ಚೀನಾ ವರುಣ ಆರ್ಭಟಕ್ಕೆ ತತ್ತರಿಸಿದೆ. ನೈಋತ್ಯ ಚೀನಾದಲ್ಲಿ ಧಾರಾಕಾರ ಮಳೆಯಿಂದಾಗಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ನಾಪತ್ತೆಯಾಗಿದ್ದಾರೆ. ಸೋಮವಾರದಿಂದ ಈವರೆಗೆ ಸುರಿದ ಭಾರಿ ಮಳೆಗೆ 15 ಜನರು ಸಾವನ್...
ನವದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಇಂದು ಗುಂಡಿನ ದಾಳಿ ನಡೆದಿದೆ. ಇದ್ದಕ್ಕಿದ್ದಂತೆ ಕೆಲವು ವಕೀಲರು ತೀವ್ರ ವಾಗ್ವಾದದಲ್ಲಿ ತೊಡಗಿದ ನಂತರ ಈ ಗುಂಡಿನ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕಾಗಮಿಸಿದ್ದು, ಗುಂಡಿನ ದಾಳಿಯಲ್ಲಿ ಯಾವುದೇ ಗಾಯಗಳಾಗಿಲ್ಲ. ಗುಂಡಿನ ದಾಳಿಯನ್ನ...
ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಮನೆಯ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಬುಲ್ಡೋಜರ್ ಅಸ್ತ್ರ ಪ್ರಯೋಗಿಸಿದ್ದಾರೆ. ಆರೋಪಿ ಸೋನು ಅಲಿಯಾಸ್ ಸಿಕಂದರ್ ಲವ್ ಜಿಹಾದ್ ಆರೋಪ ಎದುರಿಸುತ್ತಿದ್ದಾನೆ. ಉತ್ತರ ಪ್ರದೇಶದ ಫತೇಪುರ್ನಲ್ಲಿ 19 ವರ್ಷದ ಯುವತಿಯನ್ನು ಆರೋಪಿ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ ಎಂದು ಆರೋ...
ವೃದ್ದೆಯ ಮೇಲೆ ಚಿರತೆಯೊಂದು ದಾಳಿ ಮಾಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ದುಧ್ವಾ ಬಫರ್ ವಲಯದ ಧೌರಾಹ್ರಾ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ರಾಮನಗರ ಬಾಘಾ ಗ್ರಾಮದ ನಿವಾಸಿ ರಾಮಕಾಲಿ, ಚಿರತೆ ದಾಳಿಗೆ ಬಲಿಯಾದ ವೃದ್ದೆ. ದಾಳಿಯ ಕ್ರೂರತೆ ಎಷ್ಟಿತ್ತೆಂದರೆ ವೃದ್ದೆಯ ರುಂಡ...
ಉತ್ತರ ಪ್ರದೇಶದ ಗೋರಖ್ಪುರ ರೈಲು ನಿಲ್ದಾಣವನ್ನು ವಿಶ್ವ ದರ್ಜೆಯ ರೈಲು ನಿಲ್ದಾಣವನ್ನಾಗಿ ಪುನರ್ ಅಭಿವೃದ್ಧಿ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ. ಜುಲೈ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಲಿದ್ದಾರೆ. ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿಲ್ದಾಣವನ್ನು ಪುನರ್ ಅಭಿವೃದ್ಧಿಪಡಿಸಲಾಗುವುದು. ವಿಶ್ವದರ್ಜೆಯ ಪ್ರಯಾ...
ಎನ್ಸಿಪಿ ಪಕ್ಷದ ನಾಯಕ ಅಜಿತ್ ಪವಾರ್ ಕಳೆದ ವಾರ ಬಿಜೆಪಿ ಮತ್ತು ಸಿಂಧೆ ಶಿವಸೇನೆ ಬೆಂಬಲಿತ ಸರ್ಕಾರಕ್ಕೆ ಬೆಂಬಲ ನೀಡಿ, ಉಪಮುಖ್ಯಮಂತ್ರಿ ಆದರು. ಇದೀಗ ಪಕ್ಷದ ಬಹುಪಾಲು ಶಾಸಕರು ತಮ್ಮೊಂದಿಗಿದ್ದಾರೆ ಎಂಬುದನ್ನು ನಿರೂಪಿಸಲು ಎನ್ ಸಿಪಿಯ ಎರಡು ಬಣಗಳು ಇಂದು ಮುಂಬೈನಲ್ಲಿ ಸಭೆ ಕರೆದಿವೆ. ಈ ಬಗ್ಗೆ ಶರದ್ ಪವಾರ್ ಅವರು ಇಂದು ಕರೆದಿರುವ ...
ದೇಶದಲ್ಲಿ ಮಾನವೀಯತೆ ಎಂಬ ಪದಕ್ಕೆ ಕಳಂಕ ತರುವಂತಹ ಘಟನೆಯೊಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಮೆಟ್ಟಿಲುಗಳ ಮೇಲೆ ಕುಳಿತಿದ್ದ ಆದಿವಾಸಿ ಯುವಕನ ಮುಖದ ಮೇಲೆ ಮದ್ಯದ ಅಮಲಿನಲ್ಲಿದ್ದ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜಿಸಿದ್ದಾನೆ. ಈ ನಾಚಿಕೆಗೇಡಿನ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗು...
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎಸ್ಸಿಒ ರಾಷ್ಟ್ರಗಳ ನಾಯಕರ ಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಎದುರಲ್ಲೇ ಟಾಂಗ್ ನೀಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಎದುರಿಸುವಲ್ಲಿ ಯಾವುದೇ ದ್ವಂದ್ವ ನೀ...
ಸದ್ಯ ಸಾಮಾಜಿಕ ಜಾಲತಾಣದಲ್ಲಿ ದಿಗ್ಗಜ ಆಗಿರುವ ಟ್ವಿಟರ್ಗೆ ಸ್ಪರ್ಧೆ ನೀಡಲು ಫೇಸ್ಬುಕ್ ಒಡೆತನದ ಮೆಟಾ ಸಜ್ಜಾಗುತ್ತಿದೆ. ಯಾಕೆಂದರೆ ಟ್ವಿಟರ್ ರೀತಿಯ ಮೈಕ್ರೋ ಬ್ಲಾಗಿಂಗ್ ಅಪ್ಲಿಕೇಶನ್ ಅನ್ನು ಪರಿಯಿಸುವುದಾಗಿ ಮೆಟಾ ಹೇಳಿದೆ. ಟ್ವಿಟರ್ ಬಳಕೆದಾರರಿಗೆ ಸಾಲು ಸಾಲು ಷರತ್ತುಗಳನ್ನು ಟ್ವಿಟರ್ ವಿಧಿಸುತ್ತಿರುವುದರಿಂದ್ದ ಮೆಟಾ ಘೋಷಿಸ...
ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಮಗಳಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ನರಸಿಂಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇವರು ನಡೆದುಕೊಂಡು ಹೋಗ...