ಆಟೋ ಚಾಲಕನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಬೆಳಗಾವಿ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದ ಹೊರ ವಲಯದ ನಿರ್ಜನ ಪ್ರದೇಶವೊಂದರಲ್ಲಿ ನಡೆದಿದೆ.
23 ವರ್ಷ ವಯಸ್ಸಿನ ನೊಹಾನ್ ಧಾರವಾಡಕರ್ ಹತ್ಯೆಗೀಡಾಗಿರುವ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಈತ 5 ದಿನಗಳ ಹಿಂದೆ ಆಟೋದಲ್ಲಿ ಮನೆಯಿಂದ ಹೊರಗೆ ಹೋಗಿದ್ದ. ಆ ಬಳಿಕ ನಾಪತ್ತೆಯಾಗಿದ್ದ ಎನ್ನಲಾಗಿದೆ.
ನಿನ್ನೆ ತಡರಾತ್ರಿ ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಸದ್ಯ ಈತನನ್ನು ಸ್ನೇಹಿತರೇ ಹತ್ಯೆ ಮಾಡಿದ್ದಾರೆ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ.
ಘಟನೆ ಸಂಬಂಧ ನಗರ ಪೊಲೀಸರ ಆಯುಕ್ತ ಡಾ.ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೇಕೆದಾಟು ಪಾದಯಾತ್ರೆ ಅರ್ಧದಲ್ಲೇ ಬಿಟ್ಟು ತೆರಳಿದ ಸಿದ್ದರಾಮಯ್ಯ: ಕಾರಣ ಏನು ಗೊತ್ತಾ?
ಸುವರ್ಣ ನ್ಯೂಸ್, ಕನ್ನಡ ಪ್ರಭಕ್ಕೆ ಲೀಗಲ್ ನೋಟಿಸ್ ಕಳಿಸಿದ ಬಿಟಿವಿ!
“ಗಾಡಿ ಜೊತೆ ನನ್ ಹೆಂಡ್ತಿ ಮಕ್ಳನ್ನೂ ಸೀಝ್ ಮಾಡಿ…”
“ನಾಯಿಗಳಿಗೆ ವ್ಯಾಕ್ಸಿನ್ ಹಾಕಿಸ್ಬೇಕು ಹೋಗಲು ಬಿಡಿ ಸರ್…”