ಲಾಂಗ್ ನಲ್ಲಿ ಕೇಕ್ ಕತ್ತರಿಸಿ ಪೊಲೀಸರ ಅತಿಥಿಯಾದ ಆಟೋ ಚಾಲಕ!

02/06/2025
ಚಿಕ್ಕಬಳ್ಳಾಪುರ: ಮಾರಕಾಸ್ತ್ರದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಆಟೋ ಚಾಲಕನೊಬ್ಬ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.
ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ ಅನಿಲ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಹುಟ್ಟುಹಬ್ಬದ ಹಿನ್ನೆಲೆ ಲಾಂಗ್ ನಲ್ಲಿ ಕೇಕ್ ಕಟ್ ಮಾಡಿದ್ದಾನೆ. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ.
ಲಾಂಗ್ ನಲ್ಲಿ ಕೇಕ್ ಕತ್ತರಿಸುವ ವಿಡಿಯೋ ಪೊಲೀಸರ ವರೆಗೂ ತಲುಪಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆಟೋ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD