ಬೆಳ್ತಂಗಡಿ: ಕೆರೆಗೆ ಹಾರಿದ ಆಟೋ ಚಾಲಕ: ಮುಂದುವರಿದ ಹುಡುಕಾಟ
ಬೆಳ್ತಂಗಡಿ: ಗುರುವಾಯನ ಕೆರೆಯ ಕೆರೆಗೆ ಹಾರಿ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದ್ದು, ಕೆರೆಯಲ್ಲಿ ಈತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಪ್ರವೀಣ್ ಪಿಂಟೀ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಈತ ಇಂದು ಬೆಳಿಗ್ಗೆ ತನ್ನ ಸ್ನೇಹಿತರಿಗೆ ಕರೆ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
ಕೆರೆಯ ಬದಿಯಲ್ಲಿ ಈತನ ಚಪ್ಪಲಿ ಹಾಗೂ ಆಧಾರ್ ಕಾರ್ಡ್ ಲಭಿಸಿದ್ದು ಇದರಿಂದಾಗಿ ಈತ ಕೆರೆಗೆ ಹಾರಿರುವುದು ಸ್ಪಷ್ಟಗೊಂಡಿದ್ದು , ಸ್ಥಳೀಯರು ಅಗ್ನಿ ಶಾಮಕ ದಳದ ಸಹಕಾರದೊಂದಿಗೆ ಕೆರೆಯಲ್ಲಿ ಹುಡುಕಾಟ ಆರಂಭಿಸಿದ್ದಾರೆ.
ಬೆಳಾಲಿನ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಹುಡುಕಾಟದಲ್ಲಿ ಭಾಗಿಗಳಾಗಿದ್ದಾರೆ. ಕೆರೆಯಲ್ಲಿ ನೀರು ಹೆಚ್ಚಾಗಿರುವುದರಿಂದ ಹುಡುಕಾಟ ಕಷ್ಟವಾಗುತ್ತಿದೆ ಇವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka