ಕುಕ್ಕರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಗುಣಮುಖ - Mahanayaka

ಕುಕ್ಕರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಗುಣಮುಖ

purushittam poojari
15/01/2023

ಮಂಗಳೂರು: ನಗರದ ನಾಗುರಿ ಎಂಬಲ್ಲಿ ನವೆಂಬರ್ 19ರಂದು ನಡೆದ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಗೋರಿಗುಡ್ಡ ನಿವಾಸಿ ಪುರುಷೋತ್ತಮ ಪೂಜಾರಿ ಗುಣಮುಖರಾಗಿದ್ದಾರೆ.

ಅಲ್ಲದೇ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ. ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್ತು. ಇದರಲ್ಲಿ ಆರೋಪಿ ಪ್ರಯಾಣಿಕ ಮುಹಮ್ಮದ್ ಶಾರೀಕ್ ಮತ್ತು ರಿಕ್ಷಾ ಚಾಲಕ ಗೋರಿಗುಡ್ಡ ನಿವಾಸಿ ಪುರುಷೋತ್ತಮ ಪೂಜಾರಿ ಗಾಯಗೊಂಡಿದ್ದರು. ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಮುಹಮ್ಮದ್ ಶಾರೀಕ್‌ನನ್ನು ಕೆಲವು ಸಮಯದ ಹಿಂದೆ ಎನ್‌ ಐಎ ಬೆಂಗಳೂರಿಗೆ ಕರೆದೊಯ್ದಿತ್ತು. ಪುರುಷೋತ್ತಮ ಪೂಜಾರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು.

ಸುಮಾರು 56 ದಿನಗಳ ಬಳಿಕ ಗುಣಮುಖರಾಗಿದ್ದು, ಶನಿವಾರ ಬಿಡುಗಡೆಗೊಳಿಸಲಾಗಿದೆ. ಚಿಕಿತ್ಸೆಯ ವೆಚ್ಚವನ್ನು ಇಎಸ್‌ ಐ ಹಾಗೂ ಸರಕಾರದ ಮೂಲಕ ಭರಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ