ಆಟೋಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅತ್ಯಾಚಾರ ಮಾಡಿ, ಕಟ್ಟಡದಿಂದ ತಳ್ಳಿದ ಆಟೋ ಚಾಲಕ! - Mahanayaka

ಆಟೋಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅತ್ಯಾಚಾರ ಮಾಡಿ, ಕಟ್ಟಡದಿಂದ ತಳ್ಳಿದ ಆಟೋ ಚಾಲಕ!

mubarak
01/03/2024

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಬಳಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು ಲಭ್ಯವಾಗಿದ್ದು, ಮಹಿಳೆಯನ್ನು ಅತ್ಯಾಚಾರ ಎಸಗಿ, ಕಟ್ಟಡದಿಂದ ಕೆಳಗೆ ತಳ್ಳಿರುವುದು ಬಯಲಾಗಿದೆ.

ಫೆಬ್ರವರಿ 20ರಂದು ಶಾಂತಿನಗರದ ಡಬಲ್ ರೋಡ್ ಜನತಾ ಕೋ ಆಪರೇಟಿವ್ ಕಟ್ಟಡದ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಗುರುತು ಪತ್ತೆ ಸಾಧ್ಯವಾಗದ ರೀತಿಯಲ್ಲಿ ಈ ಮೃತದೇಹ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಕಟ್ಟಡದಿಂದ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು.

ಆದ್ರೆ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದಾಗ ಮಹಿಳೆಯನ್ನು ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆಟೋ ಚಾಲಕನೋರ್ವನನ್ನು ಬಂಧಿಸಿದ್ದು, ಮುಬಾರಕ್ ಎಂಬಾತ ಬಂಧಿತ ಆಟೋ ಚಾಲಕನಾಗಿದ್ದಾನೆ.

ಆಟೋಗಾಗಿ ಕಾಯುತ್ತಿದ್ದ ಮಹಿಳೆಯನ್ನು ಪಿಕ್ ಮಾಡಿದ ಆಟೋ ಚಾಲಕ ನಸುಕಿನ ಜಾವ ಸಂಪಂಗಿ ರಾಮನಗರಕ್ಕೆ ಕರೆತಂದಿದ್ದಾನೆ ಬಳಿಕ. ಕಟ್ಟಡದ ಮೊದಲ ಮಹಡಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದು, ಬಳಿಕ ಆಕೆಯನ್ನು ಕಟ್ಟಡದಿಂದ ಕೆಳಗೆ ತಳ್ಳಿ ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ಆರೋಪಿ ಪೊಲೀಸರೆದುರು ಬಾಯ್ಬಿಟ್ಟಿದ್ದಾನೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ