ಆಟೋ ಪಲ್ಟಿ: ಇಬ್ಬರಿಗೆ ಗಾಯ—ಚಾಲಕನ ಸ್ಥಿತಿ ಗಂಭೀರ
ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ತಲಪಾಡಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ತಲಪಾಡಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಈ ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka