ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಗುಚಿ ಬಿದ್ದ ಆಟೋ ರಿಕ್ಷಾ!

ರಿಕ್ಷಾ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮಗುಚಿ ಬಿದ್ದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ರಾತ್ರಿ ನಡೆದಿದೆ.
ವಾಹನಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ — ಗುರುವಾಯನಕೆರೆ ರಸ್ತೆಯಲ್ಲಿ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ರಿಕ್ಷಾವೊಂದು ಉಪ್ಪಿನಂಗಡಿ ಕಡೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭ ರಿಕ್ಷಾವು ಮಗುಚಿ ಬಿದ್ದಿದೆ. ರಿಕ್ಷಾದಲ್ಲಿ ಚಾಲಕ ಮಾತ್ರವಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಕಾರಿನ ಹಾಗೂ ರಿಕ್ಷಾದ ಮುಂಭಾಗ ಜಖಂಗೊಂಡಿವೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw