ಅಯೋಧ್ಯೆ ಗ್ಯಾಂಗ್ ರೇಪ್ ಪ್ರಕರಣ: ಆರೋಪಿ ಎಸ್ಪಿ ನಾಯಕ ಮೊಯೀದ್ ಖಾನ್ ಮನೆ ಮೇಲೆ ಸಿಎಂ ಯೋಗಿಯಿಂದ ‘ಬುಲ್ಡೋಜರ್’ ದಾಳಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ರೇಫ಼್ ಮಾರ್ಕ್ ಬುಲ್ಡೋಜರ್ ಇಂದು ಸಮಾಜವಾದಿ ಪಕ್ಷದ ನಾಯಕ ಎಂದು ಹೇಳಲಾದ ಸಾಮೂಹಿಕ ಅತ್ಯಾಚಾರ ಆರೋಪಿಯ ಮನೆಯನ್ನು ನೆಲಸಮಗೊಳಿಸಿದೆ. ಈ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಸಂತ್ರಸ್ತೆಯ ತಾಯಿಗೆ ಭರವಸೆ ನೀಡಿದ್ದಾರೆ ಮತ್ತು ಈಗ ಬುಲ್ಡೋಜರ್ ಮುಖ್ಯ ಆರೋಪಿ ಮೊಯೀದ್ ಖಾನ್ ಅವರ ಮನೆಯನ್ನು ನೆಲಸಮಗೊಳಿಸಿದೆ. ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯೋಗಿ, ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದರು.
12 ವರ್ಷದ ಸಂತ್ರಸ್ತೆ ಗರ್ಭಿಣಿಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯು ಆರೋಪಿಯ ಹೆಸರನ್ನು ಬಹಿರಂಗಪಡಿಸಿದ್ದಳು. ಅಲ್ಲದೇ ಅಪರಾಧಿಗಳು ತನ್ನ ವೀಡಿಯೊವನ್ನು ಮಾಡಿದ್ದಾರೆ ಮತ್ತು ಅವರ ವಿರುದ್ಧ ದೂರು ದಾಖಲಿಸಿದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ತನ್ನ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಳು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಅಯೋಧ್ಯೆಯಲ್ಲಿ ಇಬ್ಬರು ಪುರುಷರಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth