ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಆಯುಧ ಪ್ರದರ್ಶನ: ಸೂಕ್ತ ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ - Mahanayaka
1:50 AM Thursday 29 - January 2026

ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಆಯುಧ ಪ್ರದರ್ಶನ: ಸೂಕ್ತ ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

durgadowd
02/10/2022

ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಉಡುಪಿಯಲ್ಲಿ ನಡೆದ ದುರ್ಗ ದೌಡ್ ಕಾರ್ಯಕ್ರಮದ ಮೆರವಣಿಗೆಯಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸುತ್ತಾ ಭಯದ  ವಾತಾವರಣವನ್ನು ಸೃಷ್ಟಿಸಿದ ಕ್ರಮವನ್ನು ಸೋಶಿಯಲ್ ಡಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.

ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ, ಕಳೆದ ಬಾರಿ ನಡೆದ ಕಾರ್ಯಕ್ರಮದಲ್ಲಿಯೂ  ಇದೇ ರೀತಿಯ ತಲವಾರು ತ್ರಿಶೂಲ ಮುಂತಾದ ಮಾರಕ ಆಯುಧಗಳನ್ನು ಪ್ರದರ್ಶಿಸಲಾಗಿತ್ತು. ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದರೂ ಸಹ ಯಾವುದೇ ರೀತಿಯ ಕ್ರಮವನ್ನು ಕೈಗೊಂಡಿರಲಿಲ್ಲ  ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪೊಲೀಸರ ನಿರ್ಲಕ್ಷದಿಂದಾಗಿ ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿದ್ದು, ಇಂದು ತಲವಾರು ಪ್ರದರ್ಶಿಸಿದ ಹಿಂದೂ  ಜಾಗರಣ ವೇದಿಕೆಯ ಕಾರ್ಯಕರ್ತರ ಹಾಗೂ ಸಂಘಟಕರ ವಿರುದ್ಧ ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಕಾಯಿದೆ ಅಡಿ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿ ಬಂಧಿಸಬೇಕು ಎಂದು ಎಸ್ ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ B.N.ಶಾಹಿದ್ ಅಲಿ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ