ಅಯ್ಯಪ್ಪ ಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ!
ಮಂಗಳೂರು: ನಗರದ ಖಾಸಗಿ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪ ಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
8ನೇ ತರಗತಿಯ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಈ ಶಾಲೆಯಲ್ಲಿ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಶಿಕ್ಷಕರು ವಿದ್ಯಾರ್ಥಿಗಳಿಗೆ ಎಚ್ಚರಿಕೆಯನ್ನೂ ನೀಡಿದ್ದರು ಎಂದು ಹೇಳಲಾಗುತ್ತಿದೆ.
ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು 8ನೇ ತರಗತಿಯ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಯು ನಿನ್ನೆ ಸಂಜೆ ಶಾಲೆ ಬಿಟ್ಟ ಬಳಿಕ ಬಸ್ ಗಾಗಿ ತಂಗುದಾಣದಲ್ಲಿ ಕಾಯುತ್ತಿದ್ದಾಗ 9ನೇ ತರಗತಿಯ 4 ಮಂದಿ ವಿದ್ಯಾರ್ಥಿಗಳು ಏಕಾಏಕಿ ಬಂದು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಕೂಡಲೇ ಸ್ಥಳೀಯರು ತಡೆದಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಕರಣ ದಾಖಲಿಸಿರುವ ಕಂಕನಾಡಿ ನಗರ ಠಾಣಾ ಪೊಲೀಸರು ಹಲ್ಲೆಗೈದ ಇಬ್ಬರು ಹಿರಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
LIVE
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka