ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ವಿಚಾರದಲ್ಲಿ ಸಚಿವ ಬಿ.ನಾಗೇಂದ್ರ ಅವರ ಅವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಇಂದು ಅಧಿಕೃತವಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಈ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಉದ್ದೇಶದಿಂದ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.
ಇನ್ನೂ, ತಮ್ಮ ವಿರುದ್ಧದ ಆರೋಪಗಳು ರಾಜಕೀಯ ಎಂದು ಅವರು ಹೇಳಿದರು. ಆತ್ಮಹತ್ಯೆಗೆ ಶರಣಾದ ಅಧಿಕಾರಿ ನಿಮ್ಮ ಹೆಸರು ಬರೆದಿಟ್ಟಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಹೆಸರು ಎಲ್ಲಿಯೂ ಉಲ್ಲೇಖ ಮಾಡಿಲ್ಲ, ಅಲ್ಲಿ ಸಚಿವರು ಎಂದಷ್ಟೇ ಇದೆ, ಯಾವ ಸಚಿವರು ಅನ್ನೋದು ಇಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಯಾರ ಒತ್ತಡದಿಂದಲೂ ರಾಜೀನಾಮೆ ನೀಡುತ್ತಿಲ್ಲ, ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸ್ನೇಹಿತರು, ಹಿತೈಷಿಗಳು ಹೇಳಿದರು. ಆದರೆ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತಪ್ಪಿಸಲು ತಾನು ರಾಜೀನಾಮೆ ನೀಡುತ್ತಿರುವುದಾಗಿ ನಾಗೇಂದ್ರ ಹೇಳಿದರಲ್ಲದೇ ಈ ಈ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97