ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿ.ಆರ್.ಪಾಟೀಲ್ ರಾಜೀನಾಮೆ - Mahanayaka
7:41 AM Thursday 13 - February 2025

 ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿ.ಆರ್.ಪಾಟೀಲ್ ರಾಜೀನಾಮೆ

b r patil
01/02/2025

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಆರ್.ಬಿ.ಪಾಟೀಲ್ ರಾಜೀನಾಮೆ ನೀಡಿದ್ದು,  ಇವರ ರಾಜೀನಾಮೆ ಇದೀಗ ನಾನಾ ಚರ್ಚೆಗಳಿಗೆ ಗ್ರಾಸವಾಗಿದೆ.

ಶುಕ್ರವಾರ ಫ್ಯಾಕ್ಸ್ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಆರ್.ಬಿ.ಪಾಟೀಲ್ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆ, ಇತ್ತೀಚೆಗೆ ಬಹಿರಂಗವಾಗಿ ಆಕ್ರೋಶ ಹೊರಹಾಕುತ್ತಿದ್ದ ಬಿ.ಆರ್.ಪಾಟೀಲ್ ಇದೀಗ ರಾಜೀನಾಮೆ ತಂತ್ರದ ಮೂಲಕ ಸರ್ಕಾರಕ್ಕೆ ಬಿಸಿಮುಟ್ಟಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಈ ಹಿಂದೆ ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂಬ ವಿಚಾರವಾಗಿ  ಆರ್.ಬಿ.ಪಾಟೀಲ್ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದರು.

ಸಚಿವ ಸ್ಥಾನ ದೊರೆಯದ ಹಿನ್ನೆಲೆ ಅಸಮಾಧಾನ ವ್ಯಕ್ತಪಡಿಸಿದ್ದ ಆರ್.ಬಿ.ಪಾಟೀಲ್ ಬಳಿಕ ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕಗೊಂಡಾಗ ತಣ್ಣಗಾಗಿದ್ದರು. ಬಳಿಕ ಶಾಸಕರ ಅನುದಾನದ ವಿಚಾರಕ್ಕೆ ಗರಂ ಆಗಿದ್ದರು. ಇದೀಗ ಏಕಾಏಕಿ ಮುಖ್ಯಮಂತ್ರಿ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ