11:57 PM Saturday 31 - January 2026

4 ವರ್ಷಗಳಿಂದ ವಾಸವಾಗಿದ್ದ ಕಾವೇರಿ ನಿವಾಸ ಖಾಲಿ ಮಾಡಿದ ಬಿಎಸ್ ವೈ

b s yadiurappa
02/06/2023

ಬೆಂಗಳೂರು: ಕಳೆದ 4 ವರ್ಷಗಳಿಂದ ವಾಸವಾಗಿದ್ದ ಕುಮಾರ ಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ಕಾವೇರಿಯನ್ನು ಮಾಜಿ ಸಿಎಂ ಯಡಿಯೂರಪ್ಪ ಇಂದು ತೊರೆದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಕಾರಣ ಸರ್ಕಾರಿ ನಿವಾಸವನ್ನು ಬಿಎಸ್ ವೈ ಖಾಲಿ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಖಾಸಗಿ ನಿವಾಸ ಧವಳಗಿರಿಗೆ ಯಡಿಯೂರಪ್ಪ ಶಿಫ್ಟ್ ಆಗಿದ್ದಾರೆ.

ಬಿಎಸ್ ವೈ 2019 ರಲ್ಲಿ ಸಿಎಂ ಆದಾಗ ಇದೇ ಕಾವೇರಿ ನಿವಾಸದಲ್ಲಿದ್ದ ಸಿದ್ದರಾಮಯ್ಯ ಆರು ತಿಂಗಳವರೆಗೂ ನಿವಾಸ ಖಾಲಿ ಮಾಡಿರಲಿಲ್ಲ. ಆದರೆ ಆರು ತಿಂಗಳು ಕಾಯಿಸಿದ್ದ ಸಿದ್ದರಾಮಯ್ಯ ಸಿಎಂ ಆದ ನಂತರ ಯಡಿಯೂರಪ್ಪನವರು ತಡ ಮಾಡದೇ ಕೇವಲ 11 ದಿನಗಳಲ್ಲೇ ಕಾವೇರಿ ನಿವಾಸವನ್ನು ತೆರವು ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version