ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿಗೆ ತಮಿಳುನಾಡಿನ ಜೊತೆಗಿನ ಮೈತ್ರಿ ಕಾರಣ ಎಂದ ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದ ನೀರಿನ ಸಮಸ್ಯೆಗೆ ಕಾಂಗ್ರೆಸ್ ಹಾಗೂ ತಮಿಳುನಾಡಿನ ರಾಜಕೀಯ ಮೈತ್ರಿಯೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನ ನೀರಿನ ಬಿಕ್ಕಟ್ಟನ್ನು ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಯಾಗಿ ನಿಭಾಯಿಸಿಲ್ಲ. ಇದು ಅವರ ಅಸಮರ್ಥತೆ ಮತ್ತು ಜನರ ಬಗೆಗಿನ ನಿರ್ಲಕ್ಷ್ಯತನಕ್ಕೆ ಸಾಕ್ಷಿಯಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಮೈತ್ರಿಗಳಿಗೆ ಆದ್ಯತೆ ನೀಡುವ ಮೂಲಕ ಕರ್ನಾಟಕದ ನಾಗರಿಕರನ್ನು ಅಸಹನೀಯ ದುಃಖಕ್ಕೆ ದೂಡಿದ್ದಾರೆ. ಕಾವೇರಿ ನಿರ್ವಹಣಾ ಮಂಡಳಿ ಮುಂದೆ ಮೊದಲು ನಮ್ಮ ಹಿತಾಸಕ್ತಿಗಳನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸುವಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವೈಫಲ್ಯವಾಗಿದ್ದು, ಈಗಾಗಲೇ ಪರಿಸ್ಥಿತಿಯನ್ನು ಉಲ್ಬಣಗೊಳಿಸಿದೆ ಎಂದರು.
ತಾವೇ ಸೃಷ್ಟಿಸಿರುವ ಬಿಕ್ಕಟ್ಟಿನ ವಾಸ್ತವವನ್ನು ಅರಿತುಕೊಂಡು ಬೆಂಗಳೂರಿನ ನಾಗರಿಕರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಎಂದು ವಿಜಯೇಂದ್ರ ಇದೇ ವೇಳೆ ಒತ್ತಾಯಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth