ತನಿಖೆ ಚುರುಕು: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ - Mahanayaka
6:28 PM Saturday 14 - December 2024

ತನಿಖೆ ಚುರುಕು: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

20/10/2024

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿವೆ. ಮುಂಬೈ ಕ್ರೈಂ ಬ್ರಾಂಚ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ಬೇಲಾಪುರದ ಭಗವಂತ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಮೂಲಕ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 10 ಕ್ಕೇರಿದೆ.

ಮುಂಬೈ ಕ್ರೈಂ ಬ್ರಾಂಚ್ ಪ್ರಕಾರ, ಸಿಂಗ್ ಶೂಟರ್ ಗಳಿಗೆ ವಸತಿ ಮತ್ತು ಶಸ್ತ್ರಾಸ್ತ್ರಗಳನ್ನು ಪಡೆಯಲು ಸಹಾಯ ಮಾಡಿದ್ದ. ಆತ ರಾಜಸ್ಥಾನದಿಂದ ಮುಂಬೈಗೆ ಶಸ್ತ್ರಾಸ್ತ್ರಗಳನ್ನು ತಂದಿದ್ದ.

ಅಕ್ಟೋಬರ್ 12 ರಂದು ರಾತ್ರಿ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಬಾ ಸಿದ್ದಿಕಿ ಅವರ ಪುತ್ರ, ಶಾಸಕ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಹತ್ಯೆಯು ರಾಜಕೀಯ ರಂಗವನ್ನು ಬೆಚ್ಚಿಬೀಳಿಸಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ