ಬಾಬಾ ಸಿದ್ದೀಕ್ ಕೊಲೆ ಪ್ರಕರಣ: ಓರ್ವ ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್ - Mahanayaka

ಬಾಬಾ ಸಿದ್ದೀಕ್ ಕೊಲೆ ಪ್ರಕರಣ: ಓರ್ವ ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್

13/10/2024


Provided by

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಮತ್ತು ಮಾಜಿ ಸಚಿವ ಬಾಬಾ ಸಿದ್ದೀಕಿ ಅವರ ಹತ್ಯೆಗೆ ಸಂಬಂಧಿಸಿ ಮುಂಬೈನ ನ್ಯಾಯಾಲಯವು ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಓರ್ವನನ್ನು ಅಕ್ಟೋಬರ್ 21 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಇನ್ನು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಯನ್ನು ಅವರ ವಯಸ್ಸಿನ ಸ್ಥಿತಿಯನ್ನು ನಿರ್ಧರಿಸಲು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಗುರ್ನೈಲ್ ಸಿಂಗ್ ಗೆ ಒಂದು ವಾರ ಪೊಲೀಸ್ ಕಸ್ಟಡಿ ನೀಡಲಾಗಿದ್ದು, ಅಪ್ರಾಪ್ತ ವಯಸ್ಕನಾಗಿರುವ ಇನ್ನೋರ್ವ ಆರೋಪಿಯನ್ನು ಅವನ ನಿಜವಾದ ವಯಸ್ಸನ್ನು ನಿರ್ಧರಿಸಲು ಆಸಿಫಿಕೇಶನ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವಕೀಲರು ಕೋರ್ಟ್ ಗೆ ತಿಳಿಸಿದ್ದಾರೆ.

ಬಾಂದ್ರಾದ ನಿರ್ಮಲ್ ನಗರದಲ್ಲಿರುವ ಕಾಂಗ್ರೆಸ್ ಶಾಸಕನ ಪುತ್ರ ಝೀಶಾನ್ ಸಿದ್ದೀಕಿ ಅವರ ಕಚೇರಿ ಬಳಿ ಶನಿವಾರ ಸಂಜೆ ಮಹಾರಾಷ್ಟ್ರದ ಮಾಜಿ ಸಚಿವರನ್ನು ಗುಂಡಿಕ್ಕಿ ಕೊಂದ ಆರೋಪ ಈ ಇಬ್ಬರ ಮೇಲಿದೆ. ಅವರನ್ನು ಭಾನುವಾರ ಮಧ್ಯಾಹ್ನ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ