2:47 PM Wednesday 3 - September 2025

ಜ್ಯೂಸ್ ಬಾಟಲಿ ನುಂಗಿದ ಮಗುವಿನ ದಾರುಣ ಸಾವು

nandish
05/09/2024

ಶಿವಮೊಗ್ಗ: ಜ್ಯೂಸ್ ಬಾಟಲಿ ನುಂಗಿದ ಪರಿಣಾಮ ಒಂದೂವರೆ ವರ್ಷ ವಯಸ್ಸಿನ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ.

ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್(1.5) ಮೃತಪಟ್ಟ ಮಗುವಾಗಿದೆ. ಬುಧವಾರ ಬೆಳಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು.

ಆಟವಾಡುತ್ತಾ, ಆಕಸ್ಮಿಕವಾಗಿ ಬಾಟಲಿಯ ಮುಚ್ಚಳವನ್ನು ಮಗು ನುಂಗಿದ್ದು, ಮುಚ್ಚಳ ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಮಗು ಅಸ್ವಸ್ಥಗೊಂಡಿದೆ.

ತಕ್ಷಣವೇ ಮಗುವನ್ನು ವಾಹನವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಮಗು ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version