‘ಇಂದಿರಾ ಗಾಂಧಿ ಭಾರತ ಮಾತೆ’ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ ಸುರೇಶ್ ಗೋಪಿ

ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ, ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದು ಬಣ್ಣಿಸಿ ಅಚ್ಚರಿ ಮೂಡಿಸಿದ್ದಾರೆ. ಇವರು ಮೋದಿ ಸಂಪುಟದಲ್ಲಿ ಸಚಿವರಾಗಿಯೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪುಂಕುನ್ನಮ್ ನಲ್ಲಿರುವ ಮಾಜಿ ಮುಖ್ಯಮಂತ್ರಿ ಕರುಣಾಕರನ್ ಅವರ ‘ಮುರಳ ಮಂದಿರಂ’ ಸ್ಮಾರಕಕ್ಕೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿಯ ನಾಯಕ ಸುರೇಶ್ ಗೋಪಿ, ಕೇರಳದ ಮುಖ್ಯಮಂತ್ರಿ ಆಗಿದ್ದ ಕರುಣಾಕರನ್ ಹಾಗೂ ಹಿರಿಯ ಮಾರ್ಕ್ಸ್ ವಾದಿ ಇ.ಕೆ.ನಯನಾರ್ ರನ್ನು ತಮ್ಮ ರಾಜಕೀಯ ಗುರುಗಳು ಎಂದಿದ್ದಾರೆ. ಕರುಣಾಕರನ್ ನನ್ನ ರಾಜಕೀಯ ಗುರುವಾಗಿದ್ದು, ನನ್ನ ಈ ಭೇಟಿಗೆ ಯಾವುದೇ ರಾಜಕೀಯ ಬಣ್ಣ ಬಳಿಯಬಾರದು ಎಂದು ಮಾಧ್ಯಮ ಮಂದಿಗೆ ಸುರೇಶ್ ಗೋಪಿ ಮನವಿ ಮಾಡಿದರು.
ಆಸಕ್ತಿಕರ ಸಂಗತಿಯೆಂದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕರುಣಾಕರನ್ ರ ಪುತ್ರ ಕೆ.ಮುರಳೀಧರನ್ ರನ್ನು ಪರಾಭವಗೊಳಿಸಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವು ತ್ರಿಕೋನ ಹಣಾಹಣಿಗೆ ಸಾಕ್ಷಿಯಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth