ಹೊಸ ಮನೆಯ ಕನಸು ಕಾಣುತ್ತಿರುವ ಬಡವರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ - Mahanayaka

ಹೊಸ ಮನೆಯ ಕನಸು ಕಾಣುತ್ತಿರುವ ಬಡವರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

31/01/2021


Provided by

ಬೆಳಗಾವಿ: ಮರಳಿನ ಬೆಲೆ ಗಗನಕ್ಕೇರಿದೆ. ಈ ನಡುವೆ ಮನೆ ನಿರ್ಮಾಣ ಮಾಡಬೇಕು ಎನ್ನುವ ಬಡವರ ಕನಸಂತೂ ಗಗನ ಕುಸುಮವಾಗಿ ಮಾರ್ಪಟ್ಟಿದೆ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಡ ಜನರಿಗೆ ಸಿಹಿಸುದ್ದಿ ನೀಡಿದೆ.

ಹಳ್ಳ,  ಕೊಳ್ಳಗಳಲ್ಲಿ ಮೊದಲಾದ ಪ್ರದೇಶಗಳಲ್ಲಿ ದೊರೆಯುವ ಮರಳುಗಳನ್ನು ಉಚಿತವಾಗಿ ಬಡವರಿಗೆ ವಿತರಿಸಲು ಸರ್ಕಾರ ಮುಂದಾಗಿದೆ ಎಂದು  ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ನೈಸರ್ಗಿಕ ತಾಣಗಳಲ್ಲಿ ಸಿಗುವ ಮರಳುಗಳನ್ನು ಬಡವರಿಗೆ ಉಚಿತವಾಗಿ ನೀಡುವ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. 5 ವಿಧಗಳಲ್ಲಿ ಮರಳನ್ನು ವಿಂಗಡಿಸಿ ರಾಜ್ಯದ ಐದು ವಿಭಾಗಗಳಲ್ಲಿ 15 ದಿನಕ್ಕೊಮ್ಮೆ ಅದಾಲತ್ ನಡೆಸಿ ಸಮಸ್ಯೆಯನ್ನು ನಿವಾರಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ