ಬಹುಕೋಟಿ ಮೇವು ಹಗರಣ: ಲಾಲೂ ಪ್ರಸಾದ್ ಯಾದವ್ ದೋಷಿ; ಸಿಬಿಐ ಕೋರ್ಟ್

ರಾಂಚಿ: ಡೊರಾಂಡಾ ಮೇವು ಹಗರಣದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದಲ್ಲಿ 36 ಮಂದಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಮುಖ ಆರೋಪಿ ಲಾಲೂ ಪ್ರಸಾದ್ ಯಾದವ್ ಶಿಕ್ಷೆಯನ್ನು ಫೆ. 21ರಂದು ಪ್ರಕಟಿಸಲಾಗುವುದು ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು ಲಾಲೂ ದೋಷಿ ಎಂದು ಘೋಷಿಸಿದ ಬೆನ್ನಲ್ಲೇ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರನ್ನು ಜೈಲಿಗೆ ಕಳುಹಿಸುವ ಬದಲು ರಿಮ್ಸ್‌ಗೆ ಕಳುಹಿಸುವಂತೆ ಅವರ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಮಧ್ಯಾಹ್ನದ ನಂತರ ನ್ಯಾಯಾಲಯ ಈ ಕುರಿತು ವಿಚಾರಣೆ ನಡೆಸಲಿದೆ.
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಐದು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್‍ಗೆ ಇದುವರೆಗೆ ಶಿಕ್ಷೆಯಾಗಿದೆ. ಮೇವು ಹಗರಣದ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್‍ಗೆ ಜಾಮೀನು ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಜಮೀನಿನಲ್ಲಿ ಕುಳಿತಿದ್ದ ಮಕ್ಕಳಿಗೆ ಕಾರು ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಮೂವರ ಸಾವು
ಶಬರಿಮಲೆಗೆ ತೆರಳಿದ ಕರ್ನಾಟಕದ ಟಿಟಿ ವಾಹನ ಅಪಘಾತ: ಮೂವರ ಸಾವು, 11 ಮಂದಿಗೆ ಗಾಯ
ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು
ಕುಡಿದ ಮತ್ತಿನಲ್ಲಿ ಮೊಬೈಲ್ಗಾಗಿ ಜಗಳ: ಸ್ನೇಹಿತನ ಕೊಲೆಯಲ್ಲಿ ಅಂತ್ಯ