ಬೈಕಂಪಾಡಿ: ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅವಘಡ - Mahanayaka
12:16 PM Wednesday 10 - September 2025

ಬೈಕಂಪಾಡಿ: ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಅವಘಡ

baikampady
10/09/2025

ಪಣಂಬೂರು:  ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬುಧವಾರ ಬೆಳಗ್ಗಿನ ವೇಳೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿರುವ ಘಟನೆ ಮಂಗಳೂರು ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ.


Provided by

ಅರೋಮಾಝನ್ ಎಂಬ ಕಂಪೆನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಳಗ್ಗೆ 5 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಎಂಸಿಎಫ್, ಎನ್ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿವೆ.

ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ