ಶರಣ್ ಪಂಪ್ ವೆಲ್ ಗೆ ಜಾಮೀನು ಮಂಜೂರು
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬಂಧನಕ್ಕೊಳಗಾಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ಜಾಮೀನು ಮಂಜೂರಾಗಿದೆ.
ಬಂಧನದ ಬಳಿಕ ಪೊಲೀಸರು ಮಂಗಳವಾರ ರಾತ್ರಿಯೇ ನಗರದ ನ್ಯಾಯಾಧೀಶರ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು.
ಶರಣ್ ಪಂಪ್ ವೆಲ್ ಬಂಧನದ ಸುದ್ದಿ ಹರಡುತ್ತಿದ್ದಂತೆ, ವಿವಿಧ ಸಂಘಟನೆಗಳ ಕಾರ್ಯಕರ್ತರು ಕದ್ರಿ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದರು. ಪೊಲೀಸರ ಕ್ರಮವನ್ನು ಕಾರ್ಯಕರ್ತರು ಖಂಡಿಸಿದ್ದರು.
ಡಿಸಿಪಿ ರವಿಶಂಕರ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ, ಜನಸಮೂಹವನ್ನು ಠಾಣೆಯ ಆವರಣದಿಂದ ಚದುರಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD

























