6:34 PM Thursday 23 - October 2025

ಟೆಕ್ಕಿ ಅತುಲ್ ಸುಭಾಶ್ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

atul shubhash
04/01/2025

ಬೆಂಗಳೂರು: ಪತ್ನಿಯ ಕಿರುಕುಳ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಬೆಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನಿಖಿತಾ ಸಿಂಘಾನಿಯಾ, ನಿಶಾ ಸಿಂಘಾನಿಯ ಹಾಗೂ ಅನುರಾಗ್ ಸಿಂಘಾನಿಯಾಗೆ 29ನೇ ಸಿಸಿಎಚ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅತುಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದರು. ಈ ಬಂಧನ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಜ.4ರಂದು ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿ ಇತ್ಯರ್ಥ ಮಾಡುವಂತೆ ಕೆಳ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆ ಇಂದು ಅರ್ಜಿ ವಿಚಾರಣೆ ನಡೆಸಿ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ

Exit mobile version