ನಟ ದರ್ಶನ್, ಪವಿತ್ರಾ ಗೌಡ ಸಹಿತ 7 ಆರೋಪಿಗಳ ಜಾಮೀನು ರದ್ದು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್ ಪೀಠವು ಈ ಮಹತ್ವದ ತೀರ್ಪು ನೀಡಿದೆ.
ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.
ಹೈಕೋರ್ಟ್ ಜಾಮೀನು ನೀಡಿದ್ದು ಸರಿ ಇಲ್ಲ, ದಾಖಲೆಗಳಿಗೆ ವಿರುದ್ಧ ತೀರ್ಪು ನೀಡಲಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂದಿರೋದು ತಪ್ಪು. ಮೃತನ ಮೈ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಸಾಕ್ಷಿ ಹೇಳಿಕೆ ತಡವಾಗಿ ದಾಖಲಿಸಲಾಗಿದೆ ಅಂತ ಅನುಮಾನಿಸಿದ್ದು ಸರಿಯಲ್ಲ. ವಿಳಂಬಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಸೂಕ್ತ ಎಫ್ ಎಸ್ ಎಲ್, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳಿವೆ ಎಂದು ಪರಿಗಣಿಸಿಲ್ಲ. ಜಾಮೀನು ವಿಚಾರಣೆ ಹಂತದಲ್ಲಿ ಹೈಕೋರ್ಟ್ ಮಿನಿ ಟ್ರಯಲ್ ನಡೆಸಿದೆ. ಕೊಲೆ ಆರೋಪಿ ದರ್ಶನ್ ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವಿನ ಅಂತ ಕೋರ್ಟ್ ಹಾಜರಾಗೋದ್ರಿಂದ ವಿನಾಯಿತಿ ಪಡೆದಿದ್ರು. ಮರು ದಿನವೇ ದರ್ಶನ್ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ ಎಂದು ಸರ್ಕಾರ ವಾದ ಮಂಡಿಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD