ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲಿ ಬಿಗುವಿನ ವಾತಾವರಣ - Mahanayaka
12:21 AM Thursday 29 - January 2026

ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲಿ ಬಿಗುವಿನ ವಾತಾವರಣ

03/12/2020

ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತನ ಮೇಲೆ ಶಿವಮೊಗ್ಗದಲ್ಲಿ ಇಂದು ಮುಂಜಾನೆ ಮಾರಣಾಂತಿಕ ಹಲ್ಲೆ ನಡೆದಿದ್ದು,  ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಬಜರಂಗದಳದ ಕಾರ್ಯಕರ್ತ ನಾಗೇಶ್ ಹಲ್ಲೆಗೊಳಗಾದವರಾಗಿದ್ದು,  ಶಿವಮೊಗ್ಗದ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನಾಗೇಶ್ ಮೇಲೆ ದಾಳಿ ನಡೆಸಲಾಗಿದೆ.

ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಘಟನೆಯ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಘವೇಂದ್ರ ಅವರು ದಾಖಲಾಗಿರುವ ಆಸ್ಪತ್ರೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.




 

ಇತ್ತೀಚಿನ ಸುದ್ದಿ