ಬಜಪೆ ಪಟ್ಟಣ ಪಂಚಾಯತ್ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕೃಷ್ಣಾನಂದ ಡಿ. ಕಣಕ್ಕೆ

krishnanand d
15/12/2025

Bajpe Town Panchayat Election– 2025 ಬಜಪೆ: ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಗೊಳಪಡುವ ಸಿದ್ಧಾರ್ಥನಗರ – 11ನೇ ವಾರ್ಡ್ ( ಸಿದ್ಧಾರ್ಥ ನಗರ, ಕಲ್ಲೋಡಿ, ಜರಿ ನಗರ)ಗೆ ನಡೆಯಲಿರುವ ಚುನಾವಣೆಯಲ್ಲಿ ಸಾಮಾಜಿಕ ಹೋರಾಟಗಾರ ಡಿಎಸ್ ಎಸ್ ಮುಖಂಡರೂ ಆದ ಕೃಷ್ಣಾನಂದ ಡಿ.(Krishnananda D) ಅವರು ಆಮ್ ಆದ್ಮಿ ಪಾರ್ಟಿ ಬೆಂಬಲಿತ  ಪಕ್ಷೇತರ ಅಭ್ಯರ್ಥಿಯಾಗಿ, ಸ್ಪರ್ಧಿಸುತ್ತಿದ್ದಾರೆ.

ಕೃಷ್ಣಾನಂದ ಡಿ ಅವರು ಜೆಓಸಿ ಕಂಪ್ಯೂಟರ್ ಶಿಕ್ಷಣವನ್ನು ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನಲ್ಲಿ ಪೂರೈಸಿ, ಪದವಿ ವಿದ್ಯಾಭ್ಯಾಸವನ್ನು ಪೂರೈಸಿದ್ದಾರೆ.  ಅಲ್ಲದೇ ಸಂತ ಜೋಸೆಫ್ ಪ.ಪೂರ್ವ ಕಾಲೇಜಿನಲ್ಲಿ  ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಾಮಾಜಿಕ ಹೋರಾಟಗಳಿಗೆ ಬೆಂಬಲ ನೀಡುತ್ತಾ, ವಿಮಾನ ನಿಲ್ದಾಣ ಪುನರ್ವಸತಿ ಕೇಂದ್ರ ಸಿದ್ಧಾರ್ಥ ನಗರದ ಸಮಗ್ರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರಲ್ಲಿ ಒಬ್ಬರಾಗಿದ್ದಾರೆ, ದ.ಕ. ಜಿಲ್ಲೆಯಲ್ಲಿ ಬಹುಜನ ಚಳುವಳಿ(Bahujan Movement)ಯನ್ನು ಕಟ್ಟಿಬೆಳೆಸಿದವರಲ್ಲಿ ಪ್ರಮುಖರಾಗಿದ್ದಾರೆ. ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯನ್ನು ಸ್ಥಾಪಿಸಿ, ಮಂಗಳೂರಿನಲ್ಲೂ ಅದರ ಬ್ರಾಂಚ್ ತೆರೆದು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಹಲವಾರು ಸಾಮಾಜಿಕ ಹೋರಾಟಗಳಿಗೆ ಧ್ವನಿಯಾಗುತ್ತಾ,  ಜನ ಪರವಾಗಿ ಹೋರಾಟಗಳಿಗೆ ಬೆಂಬಲ ನೀಡಿದ್ದಾರೆ. ಸ್ಥಳೀಯ ಸಮಸ್ಯೆಗಳು, ಜಿಲ್ಲೆಯ ಅನೇಕ ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕಾಗಿ ನಡೆದ ಹೋರಾಟಗಳಲ್ಲಿ ಭಾಗಿಯಾಗಿ ಬೆಂಬಲಿಸಿದ್ದಾರೆ. ಸದ್ಯ ಸಿದ್ಧಾರ್ಥ ನಗರ –11ನೇ ವಾರ್ಡ್ ಗೆ ನಡೆಯಲಿರುವ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ವಾರ್ಡ್ ನ ಸಮಸ್ಯೆಗಳನ್ನು ಪರಿಹರಿಸಿ, ವಾರ್ಡ್ ನ ಸಂಪೂರ್ಣ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ.  ತಮ್ಮ  ‘ಕೋಟ್’ ನ  ಚಿಹ್ನೆಗೆ ಮತ ನೀಡಿ, ವಾರ್ಡ್ ನ ಸರ್ವತೋಮುಖ ಅಭಿವೃದ್ಧಿಗೆ ಕೈಜೋಡಿಸುವಂತೆ ಕೃಷ್ಣಾನಂದ ಡಿ. ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version