ಬಜರಂಗದಳ ಆರಂಭವಾಗಿದ್ದೇ ಸಂಘರ್ಷದಿಂದ, ಸಂಘರ್ಷಕ್ಕಾಗಿ: ಕಾಂಗ್ರೆಸ್ ಗೆ ಬಜರಂಗದಳ ಎಚ್ಚರಿಕೆ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಪ್ರಸ್ತಾಪವನ್ನು ವಿರೋಧಿಸಿ ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆಸಿ ತೀವ್ರ ಆಕೋಶ ವ್ಯಕ್ತಪಡಿಸಿದರು.
ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ, ಬಜರಂಗದಳ ನಿಷೇಧ ಮಾಡುತ್ತೇವೆ. ಈ ಮೂಲಕ ಬಜರಂಗ ಕಾರ್ಯಕರ್ತರ ಕೆಲಸ ಕಾರ್ಯಗಳಿಗೆ ಅಂಕುಶ ಹಾಕುತ್ತೇವೆ, ಮಟ್ಟ ಹಾಕ್ತೆವೆ ಅಂದ್ರೆ ಅದು ಕೇವಲ ನಿಮ್ಮ ಭ್ರಮೆ, ಬಜರಂಗ ಆರಂಭವಾಗಿದ್ದೇ ಸಂಘರ್ಷದಿಂದ ಸಂಘರ್ಷಕ್ಕಾಗಿ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw