3:31 AM Monday 15 - September 2025

ಶಾಲಾ ಬಾಲಕಿಯನ್ನು ಹಿಂಬಾಲಿಸಿ ಅನುಚಿತ ವರ್ತನೆ: ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಜನ

mulki
18/12/2022

ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಾಲಕಿ ಜತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ.

ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ವ್ಯಕ್ತಿಯ ವಿರುದ್ಧ ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಜತೆಗೆ ಬಂಧಿತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಗಲಭೆಯೊಂದಿಗೆ ಹಲ್ಲೆಯ ಪ್ರಕರಣದ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿ ಡಿ.13 ರಂದು ಬೈಕ್ ನಲ್ಲಿ ಹಿಂಬಾಲಿಸುತ್ತಾ ಕರೆಕಾಡು ಎಂಬಲ್ಲಿ ಬಂದು ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎಂಬ ಮಾಹಿತಿಯನ್ನು ಪೋಷಕರಿಗೆ ತಿಳಿಸಿದಾಗ, ಬಾಲಕಿಯ ಆಕೆಯ ತಂದೆ ಮತ್ತು ಸ್ನೇಹಿತರು ಇದನ್ನು ಗಮನಿಸಿ, ಮತ್ತೆ ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಹಾಗೂ ಕಂಬಕ್ಕೆ ಕಟ್ಟಿ ಹಾಕಿದ್ದು, ಶರ್ಟ್ ಹರಿದಿರುವ ದೃಶ್ಯದ ಫೋಟೋಗಳ ಕ್ಲಿಪ್ಪಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version