ಬಾಲಕಿ ಮೇಲೆ ಅತ್ಯಾಚಾರ, ಗರ್ಭಪಾತ: ನಾಲ್ವರ ವಿರುದ್ಧ ಪ್ರಕರಣ ದಾಖಲು - Mahanayaka

ಬಾಲಕಿ ಮೇಲೆ ಅತ್ಯಾಚಾರ, ಗರ್ಭಪಾತ: ನಾಲ್ವರ ವಿರುದ್ಧ ಪ್ರಕರಣ ದಾಖಲು

crime news
04/01/2023

ಬಾಲಕಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ ಪರಿಸರದಿಂದ ವರದಿಯಾಗಿದೆ.

ಬಾಲಕಿಯು ತನ್ನ ಹತ್ತಿರದ ಸುಧೀರ್ ಎಂಬವನ ಮನೆಗೆ ಭಾನುವಾರ ಹಾಗೂ ಇತರ ರಜಾ ದಿನಗಳಲ್ಲಿ ಟಿವಿ ವೀಕ್ಷಣೆಗೆಂದು ಹೋಗುತ್ತಿದ್ದು, ಈ ಸಮಯ ಸುಧೀರನು  ಸಮೀಪದಲ್ಲಿರುವ ಆತನ ಅಜ್ಜಿ ಮನೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಬೆದರಿಸಿ ಅತ್ಯಾಚಾರ ನಡೆಸಿ ಬಳಿಕ ಆಗಾಗ ಈ ಕೃತ್ಯವನ್ನು ಕಳೆದ ಒಂದು ವರ್ಷದಿಂದ ಮುಂದುವರಿಸುತ್ತಿದ್ದ.

ಇದರಿಂದ ಬಾಲಕಿಯು ಗರ್ಭವತಿಯಾಗಿದ್ದು ಪಾರ್ವತಿ, ಮನೋಹರ ಹಾಗೂ ಮಾದುಮಾಮ ಎಂಬವರ ಜತೆ ಸೇರಿ ಯಾವುದೋ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿದ್ದನು.

ಈ ವಿಚಾರವಾಗಿ ಡಿ.30ರಂದು ಚೈಲ್ಡ್ ಲೈನ್ ನಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಬಂದಿದ್ದು, ಇದನ್ನು ಖಚಿತಪಡಿಸಲು ಸಿಡಿಪಿಒ ಕಚೇರಿ ಅಧಿಕಾರಿಗಳೊಂದಿಗೆ ಮಹಿಳಾ ಪೊಲೀಸ್ ಸಿಬ್ಬಂದಿ ಮಾಹಿತಿ ಪಡೆಯಲು ಪ್ರಯತ್ನಿಸಿದ್ದರು  ಸಾಧ್ಯವಾಗಿರಲಿಲ್ಲ.

ಮಕ್ಕಳ ಕಲ್ಯಾಣ ಸಮಿತಿ ಆದೇಶದ ಮೇರೆಗೆ ಮೂಡುಬಿದ್ರೆಯ ಪ್ರಜ್ಞಾ ನಿರ್ಗತಿಕ ಮಕ್ಕಳ ಕುಟೀರದಲ್ಲಿ ಆಪ್ತ ಸಮಾಲೋಚನೆ ನಡೆಸಿ ಬಳಿಕ ಬಾಲಕಿಯಿಂದ ಬಂದ ಮಾಹಿತಿಯಂತೆ ನಾಲ್ವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ