ಬಾಲಕಿಗೆ ಲೈಂಗಿಕ ದೌರ್ಜನ್ಯ, ಗರ್ಭಪಾತ ಪ್ರಕರಣ: ಪ್ರಮುಖ ಆರೋಪಿ ಸುಧೀರ್ ಬಂಧನ - Mahanayaka

ಬಾಲಕಿಗೆ ಲೈಂಗಿಕ ದೌರ್ಜನ್ಯ, ಗರ್ಭಪಾತ ಪ್ರಕರಣ: ಪ್ರಮುಖ ಆರೋಪಿ ಸುಧೀರ್ ಬಂಧನ

sudheer
17/01/2023


Provided by

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಎಂಬಾತನನ್ನು ‌ಪೊಲೀಸರು‌ ಬಂಧಿಸಿರುವುದಾಗಿ ವರದಿಯಾಗಿದೆ.


Provided by

ಕಡಿರುದ್ಯಾವರ ಗ್ರಾಮದ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಕೇಸು‌‌ ದಾಖಲಾದ ಬಳಿಕ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಸುಧೀರ್ ಬಂಧನಕ್ಕೆ‌ ಒತ್ತಾಯಿಸಿ ಇತ್ತೀಚೆಗೆ ಬಿಲ್ಲವ ಸಂಘಟನೆಗಳಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಗಿತ್ತು.

ಈ ಪ್ರಕರಣದಲ್ಲಿ ಶಾಮೀಲಾಗಿರುವ ಕಡಿರುದ್ಯಾವರ ಕೊಪ್ಪದ ಗಂಡಿಯ ಮನೋಹರ ಹಾಗೂ ಮಂಗಳೂರು ಕೋಣಾಜೆಯ ಮಾಧವ ಯಾನೆ ಮಾಧು ಎಂಬ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಸುಧೀರನನ್ನು ಜ.17ರಂದು  ಬಂಧಿಸಲಾಗಿದೆ.


Provided by

ಗರ್ಭಪಾತದ ಘಟನೆ ಸೇರಿದಂತೆ ಇನ್ನೂ  ಹಲವರು ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ಈತನಿಂದ ಲಭಿಸುವ ಮಾಹಿತಿಗಳ ಆಧಾರದ ಮೇಲೆ ಪೊಲೀಸರು ಇನ್ನಷ್ಟು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ